ರಾಜ್ಯದಲ್ಲಿ ಒಂದೇ ಒಂದು ಕನ್ನಡ ಶಾಲೆಗಳನ್ನು ಮುಚ್ಚೋದಿಲ್ಲ – ಸದನದಲ್ಲಿ ಸ್ಪಷ್ಟನೆ ನೀಡಿದ ಸಚಿವ ಮಧು ಬಂಗಾರಪ್ಪ…..

khushihost
ರಾಜ್ಯದಲ್ಲಿ ಒಂದೇ ಒಂದು ಕನ್ನಡ ಶಾಲೆಗಳನ್ನು ಮುಚ್ಚೋದಿಲ್ಲ – ಸದನದಲ್ಲಿ ಸ್ಪಷ್ಟನೆ ನೀಡಿದ ಸಚಿವ ಮಧು ಬಂಗಾರಪ್ಪ…..

ಬೆಳಗಾವಿ

ರಾಜ್ಯದಲ್ಲಿ ಒಂದು ಕನ್ನಡ ಶಾಲೆ ಮುಚ್ಚಲ್ಲ ನಮ್ಮ ರಕ್ತದಲ್ಲೇ ಕನ್ನಡವಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು ಬೆಳಗಾವಿ ಯಲ್ಲಿ ನಡೆಯುತ್ತಿ ರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು ನಮ್ಮ ರಕ್ತದಲ್ಲೇ ಕನ್ನಡವಿದೆ. ರಾಜ್ಯದಲ್ಲಿ ಯಾವುದೇ ಕನ್ನಡ ಮಾಧ್ಯಮದ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದರು.

ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿ ಸಿದರು.ಅಲ್ಲದೆ, ಗ್ರಾಮೀಣ ಭಾಗದ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮಹತ್ವದ ಯೋಜನೆ ಪ್ರಕಟಿಸಿದರು.

ರಾಜ್ಯದ ಶೈಕ್ಷಣಿಕ ಚಿತ್ರಣವನ್ನೇ ಬದಲಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಒಂದೊಂದು ‘ಕರ್ನಾಟಕ ಪಬ್ಲಿಕ್ ಶಾಲೆ’ (ಕೆಪಿಎಸ್) ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. 2025-26ನೇ ಸಾಲಿನಲ್ಲಿಯೇ ಸುಮಾರು 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸ ಲಾಗುತ್ತಿದೆ.

ಬಜೆಟ್‌ನಲ್ಲಿ ಈಗಾಗಲೇ 500 ಹೊಸ ಕೆಪಿಎಸ್ ಶಾಲೆ ಗಳನ್ನು ಆರಂಭಿಸಲು ಘೋಷಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ದ್ವಿತೀಯ ಪಿಯುಸಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಗಳಿಗೆ ಉತ್ತಮ ಬೇಡಿಕೆ ಇದೆ ಎಂದು ತಿಳಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.